ಪ್ರಗತಿ ವಾಣಿ ನ್ಯೂಸ್ ಯಲಬುರ್ಗಾ
ಕಾಯಕದಲ್ಲಿ ದೇವರನ್ನು ಕಾಣುವಂತೆ ತಮ್ಮ ವಚನಗಳ ಮೂಲಕ ಸಂದೇಶ ಸಾರಿದ ಮಾನವತಾವಾದಿ ಬಸವಣ್ಣನವರ ಆದರ್ಶ ಎಲ್ಲರೂ ಪಾಲಿಸಬೇಕು ಎಂದು ತಹಶೀಲ್ದಾರ್ ಶ್ರೀಶೈಲ ತಳವಾರ್ ಹೇಳಿದರು.
ಪಟ್ಟಣದ ಮೊಗ್ಗಿ ಬಸವೇಶ್ವರ ದೇವಸ್ಥಾನದಲ್ಲಿ ತಾಲೂಕಾಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
೧೨ನೇ ಶತಮಾನದಲ್ಲಿ ಸಮಾಜದ ಅಂಕು ಡೊಂಕು ತಿದ್ದುವಲ್ಲಿ ಬಸವಾದಿ ಶರಣರು ತಮ್ಮ ವಚನಗಳ ಸಾರದ ಮೂಲಕ ಶ್ರಮಿಸಿದ್ದಾರೆ. ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ, ಮೂಢನಂಬಿಕೆ ಸೇರಿದಂತೆ ಹಲವು ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲದಲ್ಲಿ ವಚನಕಾರರು ತಮ್ಮ ಸರಳ ವಚನಗಳ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದ್ದರು. ೧೨ನೇ ಶತಮಾನದ ಬಹುದೊಡ್ಡ ಸಮಾಜ ಸುಧಾರಕ ಬಸವಣ್ಣನವರ ತತ್ವ, ಆದರ್ಶ ಹಾಗೂ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಹೇಳಿದರು. ಹಿರಿಯ ಮುಖಂಡ ವೀರಣ್ಣ ಹುಬ್ಬಳ್ಳಿ ಮಾತನಾಡಿದರು.
ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಉಪಾಧ್ಯಕ್ಷೆ ಶಾಂತಾ ಮಾಟೂರು, ಗ್ರೇಡ್೨ ತಹಶೀಲ್ದಾರ್ ನಾಗಪ್ಪ ಸಜ್ಜನ್, ಪ್ರಮುಖರಾದ ಸುರೇಶಗೌಡ ಶಿವನಗೌಡ್ರ,ಅಮರಪ್ಪ ಕಲಬುರ್ಗಿ, ಅಂದಾನಗೌಡ ಉಳ್ಳಾಗಡ್ಡಿ, ಸಂಗಣ್ಣ ತೆಂಗಿನಕಾಯಿ, ಶರಣಪ್ಪ ಅರಕೇರಿ, ಶಿವನಗೌಡ ದಾನರಡ್ಡಿ, ಶರಣಪ್ಪ ಕೊಪ್ಪಳ, ಷಣ್ಮುಖಪ್ಪ ರಾಂಪೂರ, ಬಸವರಾಜ ಅಧಿಕಾರಿ, ಬಸವರಾಜ ಅಧಿಕಾರಿ, ಕೆ.ಜಿ.ಪಲ್ಲೇದ, ಪಪಂ ಸದಸ್ಯರಾದ ಕಳಕಪ್ಪ ತಳವಾರ್, ಬಸಲಿಂಗಪ್ಪ ಕೊತ್ತಲ್, ಮುಖ್ಯಾಧಿಕಾರಿ ಶಿವಕುಮಾರ ಕಟ್ಟಿಮನಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇನ್ನಿತರರಿದ್ದರು.
Post a Comment