ಸರ್ಕಾರಿ ನೌಕರರ ಮನೆಯಲ್ಲಿ ಕಡ್ಡಾಯವಾಗಿ ದ್ವಜಾರೋಹಣ ಮಾಡಿ


ಪ್ರಗತಿ ವಾಣಿ, ಕೊಪ್ಪಳ
ಯಲಬುರ್ಗಾ:75 ಸ್ವಾತಂತ್ರ್ಯ ಸಂಭ್ರಮಾಚರಣೆ ಅಂಗವಾಗಿ ಪ್ರತಿಯೊಬ್ಬರ ಮನೆ ಮೇಲೆ ಈ ಭಾರಿ ಧ್ವಜಾರೋಹಣ ಮಾಡಲು ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಆ.13 ರಿಂದ 15ರವರೆಗೆ ಸರ್ಕಾರಿ ನೌಕರರು ಕಡ್ಡಾಯವಾಗಿ ತಮ್ಮ ಮನೆಗಳ ಮೇಲೆ ಧ್ವಜಾರೋಹಣ ನೆರವೇರಿಸಬೇಕು ಎಂದು ತಾಲೂಕು ತಹಶಿಲ್ದಾರರಾದ ಶ್ರೀಶೈಲ್ ತಳವಾರ ಹೇಳಿದರು.
ನಗರದ ತಾಲೂಕು ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆದ ಹರ್ ಘರ್ ತಿರಂಗಾ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮೂರು ದಿನಗಳ ನಿರಂತರವಾಗಿ ಧ್ವಜಾರೋಹಣ ನೆರವೇರಿಸಬೇಕು. ಯಾವುದೇ ಕಾರಣಕ್ಕೂ ತಪ್ಪಾಗಿ ಧ್ವಜ ಹಾರಿಸಬಾರದು ಎಂದು ಎಚ್ಚರಿಕೆ ನೀಡಿದರು.

ಯಲಬುರ್ಗಾ ತಾಲೂಕಿನಲ್ಲಿ 24 ಕೆರೆಗಳಳಿದ್ದು, ಈಗಾಗಲೇ ಎಲ್ಲ ಕೆರೆಗಳು ಸರ್ವೆಯಾಗಿವೆ. ಮತ್ತೊಮ್ಮೆ ಸರ್ವೆದವರಿಗೆ ಮಾಹಿತಿ ಕೊಟ್ಟು ಹದ್ದುಬಸ್ತು ಮಾಡಿಕೊಳ್ಳಬೇಕು. ಈಗ ನಿರ್ಮಾಣ ಮಾಡುತ್ತಿರುವ ಅಮೃತ ಸರೋವರ ಕೆರೆಗಳನ್ನು ಅಭಿವೃದ್ಧಿ ಮಾಡಬೇಕು. ಇದರಿಂದ ಯಾವುದೇ ಸಮಸ್ಯೆ ಬರುವುದಿಲ್ಲ. ಅಮೃತ ಸರೋವರಗಳಡಿ ನಿರ್ಮಾಣವಾಗುವ ಕೆರೆಗಳಿಂದ ಕುಡಿಯುವ ನೀರಿನ ಸಮಸ್ಯೆ ದೂರವಾಗಲಿದೆ ಎಂದರು.
ಗ್ರಾಮ ಪಂಚಾಯತಿ ಮಟ್ಟದಲ್ಲಿ ಸರ್ಕಾರಿ ಜಾಗದ ಸಮಸ್ಯೆ ಬಂದಲ್ಲಿ ಪಿಡಿಒರವರು ಸರಿಪಡಿಸಬೇಕು‌. ಅದಕ್ಕೆ ಸಂಬಂದಪಟ್ಟ ದಾಖಲಾತಿಗಳನ್ನು ಕಾಯ್ದಿಟ್ಟುಕೊಂಡು ಸರಿಯಾಗಿ ನಿರ್ವಹಣೆ ಮಾಡಬೇಕು.
ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಪಾಟೀಲ್ ಬಿರಾದಾರ, ಸಹಾಯಕ ನಿರ್ದೇಶಕರಾದ ನಿಂಗನಗೌಡ,ಕು. ಗೀತಾ ಅಯ್ಯಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಸಿಂಧು ಎಲಿಗಾರ, ತಾಲೂಕು ಬಿಇಒರಾದ ಪದ್ಮನಾಭ ಕರ್ಣಂ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ ಹಾಗೂ ಎಲ್ಲ ಗ್ರಾಮ ಪಂಚಾಯತಿ ಪಿಡಿಒಗಳು, ವಿವಿಧ ಇಲಾಖೆ ಅಧಿಕಾರಿಗಳು, ತಾಪಂ ಸಿಬ್ಬಂದಿ ಹಾಜರಿದ್ದರು.
""""'''

0/Post a Comment/Comments