ವಿದ್ಯಾರ್ಥಿ ದೆಸೆಯಿಂದ ಕಾನೂನು ಅರಿವು ಮೂಡಿಸಿ


ಪ್ರಗತಿ ವಾಣಿ, ಯಲಬುರ್ಗಾ
ವಿದ್ಯಾರ್ಥಿಗಳು ಕಾನೂನಿನ ಸಾಮಾನ್ಯ ಜ್ಞಾನ ಹೊಂದಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಗುರುವಾರ ಹಮ್ಮಿಕೊಂಡಿದ್ದ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಿಗೆ ಕಾನೂನಿನ ಅರಿವು ಮೂಡಿಸಿದರೆ, ಭವಿಷ್ಯದಲ್ಲಿ ಗಂಭೀರ ಸಮಸ್ಯೆಗಳು ಉದ್ಭವಿಸುವುದಿಲ್ಲ. ಹೀಗಾಗಿ ಶಿಕ್ಷಕರು ಕೂಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಉತ್ತಮ ನಾಗರಿಕರನ್ನಾಗಿ ಮಾಡಬೇಕು ಎಂದರು.
ವಕೀಲ ಮಲ್ಲನಗೌಡ ಪಾಟೀಲ್ ಮಾತನಾಡಿ, ಮಕ್ಕಳು ದೇಶದ ಸಂಪತ್ತು. ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು. ಮಕ್ಕಳಿಗೆ ಕಾನೂನಿನಲ್ಲಿ ಬದುಕುವ ಹಕ್ಕು, ರಕ್ಷಣೆ ಹಕ್ಕು, ವಿಕಾಸ ಒಂದುವ ಹಕ್ಕು ಹಾಗೂ ಭಾಗವಹಿಸುವ ಹಕ್ಕು ಇದೆ ಎಂದರು.

ಮುಖ್ಯಶಿಕ್ಷಕ ವೀರನಗೌಡ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಶರಣಗೌಡ ಪಾಟೀಲ್, ಸೋಮಶೇಖರ ನರೇಗಲ್, ದೇವಪ್ಪ ಹಾದಿಮನಿ, ಈರಣ್ಣ ಚಿಕ್ಕನರಗುಂದ, ಹನುಮಂತಪ್ಪ ಉಜ್ಜನ್ನವರ್ ಸೇರಿದಂತೆ ಇನ್ನಿತರರಿದ್ದರು.
--

0/Post a Comment/Comments