ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹಿಸಿ

ಪ್ರಗತಿ ವಾಣಿ, ಕೊಪ್ಪಳ
ಯಲಬುರ್ಗಾ: ಮಕ್ಕಳಲ್ಲಿ ಅಡಗಿರುವ ಸುಪ್ತ ಕಲೆಯ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಪ್ರೋತ್ಸಾಹಿಸಬೇಕಿದೆ ಎಂದು ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಹೇಳಿದರು.

ಪಟ್ಟಣದ ಎಸ್ಎ ನಿಂಗೋಜಿ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಲಯದ  ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಪ್ರತಿಭೆ ಅನಾವರಣಕ್ಕೆ ಸಾಕ್ಷಿಯಾಗಲಿದೆ ಎಂದರು.

ಬಿಇಒ ಪದ್ಮನಾಭ ಕರ್ಣಂ ಅವರು ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವ ಜವಾಬ್ದಾರಿ ನಿರ್ಣಾಯಕರ ಮೇಲಿದೆ. ಪ್ರತಿಯೊಬ್ಬ ಮಗು ತನ್ನದೇ ಆದ ವ್ಯಕ್ತಿತ್ವ ಹೊಂದಿರುತ್ತದೆ.  ಸರ್ಕಾರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಶೀಘ್ರದಲ್ಲಿ ಮಕ್ಕಳಿಗೆ ಶೂ ಸಾಕ್ಸ್ ದೊರಕಲಿವೆ ಎಂದರು. ಕಸಾಪ ಮಾಜಿ ಜಿಲ್ಲಾಧ್ಯಕ್ಷ ವೀರಣ್ಣ ನಿಂಗೋಜಿ ಮಾತನಾಡಿದರು. ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮಂಜುನಾಥ ತೆಗ್ಗಿನಮನಿಯನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಪಪಂ ಸ್ಥಾಯಿ ಸಮಿತಿಯ ಅಧ್ಯಕ್ಷ ಕಳಕಪ್ಪ ತಳವಾರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಫ್.ಎಂ.ಕಳ್ಳಿ, ಬಿಆರ್‌ಸಿ ಅಶೋಕ ಗೌಡರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್.ವಿ.ಧರಣಾ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವೈ.ಜಿ.ಪಾಟೀಲ್, ಕಾರ್ಯದರ್ಶಿ ಸಿದ್ದಲಿಂಗಪ್ಪ ಶ್ಯಾಗೋಟಿ, ಗಣ್ಯರಾದ ಮೆಹಬೂಬ್ ಬಾದಷಾಹ, ಕನಕಪ್ಪ ಕಂಬಳಿ, ಅಶೋಕ ಮಾಲಿಪಾಟೀಲ್, ರಾಘವೇಂದ್ರ, ಕಳಕಮಲ್ಲಪ್ಪ ಅಂತೂರು, ಈರಣ್ಣ ಗಾಣಗೇರ್, ಶರಣಪ್ಪ ಕೊಪ್ಪದ್, ಪ್ರಭಯ್ಯ ಬಳಗೇರಿಮಠ ಸೇರಿದಂತೆ ಇತರರಿದ್ದರು.
----

0/Post a Comment/Comments