ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಿ

ಪ್ರಗತಿ ವಾಣಿ, ಕೊಪ್ಪಳ
ಯಲಬುರ್ಗಾ: ಗರ್ಭಿಣಿ ಬಾಣಂತಿಯರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಸಿಡಿಪಿಒ ಅಧಿಕಾರಿ ಸಿಂಧು ಎಲಿಗಾರ ಅವರು ಹೇಳಿದರು.
ತಾಲೂಕಿನ ಗುನ್ನಾಳ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಲಯ ಮಟ್ಟದ ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಮಹಿಳೆಯರಿಗೆ ವಿಶೇಷ ಸೌಲಭ್ಯ ಒದಗಿಸಿದೆ. ಮಾತೃವಂದನಾ, ಸುಕನ್ಯ ಸಮೃದ್ಧಿ ಯೊಜನೆ ಸದ್ಬಳಕೆಯಾಗಬೇಕು. ರಕ್ತಹೀನತೆ, ಸ್ವಚ್ಛತೆ ಬಗ್ಗೆ ಗಮನಹರಿಸಬೇಕು. ದೇಹಕ್ಕೆ ಪೌಷ್ಟಿಕಾಂಶ ಒದಗಿಸುವ ಮೊಳಕೆ ಕಾಳು, ತರಕಾರಿ ಪದಾರ್ಥಗಳ ಎತೇಚ್ಛವಾಗಿ ಉಪಯೋಗಿಸಬೇಕು ಎಂದರು.
ಇದೆ ವೇಳೆ ಗರ್ಭಿಣಿಯರಿಗೆ ಸೀಮಂತ, ಆರು ತಿಂಗಳ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಶರಣಪ್ಪ ಇಂಗಳದಾಳ, ಅಂಗನವಾಡಿ ವಲಯ ಮೇಲ್ವಿಚಾರಕಿ ಗಿರಿಜಾ ಕಡಿವಾಲರ, ಪಿಎಚ್‌ಸಿ ಆಡಳಿತ ವೈದ್ಯಾಧಿಕಾರಿ ದಯಾನಂದಸ್ವಾಮಿ, ವೈದ್ಯಾಧಿಕಾರಿ ಮಂಜುನಾಥ, ಆರೋಗ್ಯ ಸಿಬ್ಬಂದಿ ಮಲ್ಲಯ್ಯ, ಪೋಷಣ್ ಅಭಿಯಾನದ ತಾಲೂಕು ಸಂಯೋಜಕ ವಿರೂಪಾಕ್ಷಯ್ಯ ಕವಟಿಗಿಮಠ ಹಾಗೂ ಗ್ರಾಪಂ ಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಸೇರಿದಂತೆ ಇತರರಿದ್ದರು.

0/Post a Comment/Comments