ಮಹನೀಯರ ಜಯಂತಿ ಆಚರಣೆಗೆ ಧನಸಹಾಯ

ಪ್ರಗತಿವಾಣಿ, ಕೊಪ್ಪಳ
ಯಲಬುರ್ಗಾ:ತಾಲೂಕಿನ ಹಳ್ಳಿಗಳಲ್ಲಿ ಕನಕ ಜಯಂತಿ ಆಚರಣೆಗೆ ತಲಾ ಐದು ಸಾವಿರ ರೂ. ನೀಡಲಾಗುವುದು ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಹರೀಶ್ ಹೇಳಿದರು.
ಪಟ್ಟಣದ ಎನ್‌ಸಿಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಅವಳಿ ತಾಲೂಕಿನಲ್ಲಿ ಕನಕ ಜಯಂತಿ ಆಚರಣೆ ಮಾಡುವ ಪ್ರತಿ ಗ್ರಾಮಕ್ಕೆ ವೈಯಕ್ತಿಕವಾಗಿ ೫ ಸಾವಿರ ರೂ. ನೀಡಲಾಗುವುದು. ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಿವಿಧ ಮಹನೀಯರ ಜಯಂತಿ ಆಚರಣೆಗೆ ತಲಾ ೧೦ ಸಾವಿರ ರೂ. ಸಹಾಯ ಮಾಡಲಾಗುತ್ತದೆ ಎಂದು ಘೋಷಿಸಿದರು.
ಕ್ಷೇತ್ರದಲ್ಲಿ ಇತ್ತೀಚಿಗೆ ಮಳೆಯಿಂದ ಹಾನಿಯಾದ ಬಡವರಿಗೆ ನಮ್ಮ ಪಕ್ಷದಿಂದ ಆರ್ಥಿಕ ಸಹಾಯ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಕ್ಷೇತ್ರಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡಲಾಗುಗುವುದು. ೨೦೨೩ರ ವಿಧಾನಸಭಾ ಚುನಾವಣೆಗೆ ಯಲಬುರ್ಗಾ ಕ್ಷೇತ್ರದಿಂದ ಎನ್‌ಸಿಪಿ ಅಭ್ಯರ್ಥಿಯಾಗಿ ನಾನೇ ನಿಲ್ಲುತ್ತೇನೆ  ಎಂದು ತಿಳಿಸಿದರು. 
ರಾಜ್ಯದಲ್ಲಿ ೩೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎನ್‌ಸಿಪಿ ಅಭ್ಯರ್ಥಿಗಳು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ರಾಜ್ಯದ ನಾನಾ ಕಡೆ ಪಕ್ಷ ಸಂಘಟನೆಗೆ ಶ್ರಮಿಸಲಾಗುತ್ತಿದೆ. ಕ್ಷೇತ್ರದಲ್ಲಿ ವಿವಿಧ ಪಕ್ಷಗಳ ಮುಖಂಡರು ನನ್ನ ಜತೆ ಸಂಪರ್ಕದಲ್ಲಿದ್ದು ಎನ್‌ಸಿಪಿಗೆ ಸೇರ್ಪಡೆ ಆಗಲಿದ್ದಾರೆ. 
ಇಡೀ ರಾಜ್ಯದಲ್ಲಿ ಯಲಬುರ್ಗಾ ತಾಲೂಕು ಹಿಂದುಳಿದ ಹಣೆಪಟ್ಟಿಯನ್ನು ಕಟ್ಟಿಕೊಂಡಿದೆ. ಇದನ್ನು ಅಳಿಸಿ ಒಂದು ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪ ನಮ್ಮದಾಗಿದೆ. ಯಾವುದೇ ವ್ಯಕ್ತಿ ದುಡ್ಡಿನಿಂದ ಅಧಿಕಾರ ಪಡೆಯಲು ಸಾಧ್ಯವಿಲ್ಲ,ಲ. ಜನರ ಪ್ರೀತಿ, ವಿಶ್ವಾಸ ಆಶೀರ್ವಾದದಿಂದ ಅಧಿಕಾರ ಪಡೆಯಲು ಸಾಧ್ಯ ಎಂದರು.
ಎರಡು ತಿಂಗಳ ಬಳಿಕ ಯಲಬುರ್ಗಾದಲ್ಲಿ ದೊಡ್ಡ ಪ್ರಮಾಣದಲ್ಲಿ ಎನ್‌ಸಿಪಿ ಪಕ್ಷದ ಸಂಘಟನೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ ಪವರ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಪ್ರದೀಪಕುಮಾರ್, ಜಿಲ್ಲಾಧ್ಯಕ್ಷ ಬಸವರಾಜ ಹಳ್ಳಿ, ತಾಲೂಕು ಅಧ್ಯಕ್ಷ ನಾಗನಗೌಡ ಪೋ.ಪಾಟೀಲ್ ಇದ್ದರು.

0/Post a Comment/Comments