ಸಮಾಜದ ಉದ್ಧಾರಕ್ಕಾಗಿ ಶ್ರಮಿಸಿದ ಚೌಡಯ್ಯ

ಪ್ರಗತಿವಾಣಿ, ಕೊಪ್ಪಳ
ಯಲಬುರ್ಗಾ
ಸಮಾಜದ ಉದ್ಧಾರಕ್ಕಾಗಿ ಶ್ರಮಿಸಿದ ಅಂಬಿಗರ ಚೌಡಯ್ಯನವರ ಆದರ್ಶ ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಶ್ರೀಶೈಲ ತಳವಾರ್ ಹೇಳಿದರು.
ಪಟ್ಟಣದ ರಂಗಮಂದಿರದಲ್ಲಿ ತಾಲೂಕಾಡಳಿತ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಸವಾದಿ ಶರಣರ ಸಮಕಾಲೀನರಾದ ಅಂಬಿಗರ ಚೌಡಯ್ಯ ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಮೂಢನಂಬಿಕೆ, ಮೇಲು ಕೀಳು, ತಾರತಮ್ಯ ಹೋಗಲಾಡಿಸುವಲ್ಲಿ ಹೋರಾಡಿದ್ದಾರೆ. ಚೌಡಯ್ಯ ವೃತ್ತಿಯಲ್ಲಿ ಅಂಬಿಗರಾದರೂ ವಚನಗಳ ಸಾರದ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ. ಅಂಥ ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಮುನ್ನಡೆಯಬೇಕು ಎಂದರು. 
ಮುಖ್ಯಶಿಕ್ಷಕ ದೇವಪ್ಪ ವಾಲ್ಮೀಕಿ ಉಪನ್ಯಾಸ ನೀಡಿದರು.
ಕಾರ್ಯಕ್ರಮಕ್ಕೂ ಮುಂಚೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಬಿಗರ ಚೌಡಯ್ಯ ಬಾವಚಿತ್ರ ಮೆರವಣಿಗೆ ನಡೆಯಿತು.
ಈ ಸಂದರ್ಭ ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸದಸ್ಯ ರೇವಣಪ್ಪ ಹಿರೇಕುರುಬರ್, ಸಮುದಾಯದ ತಾಲೂಕು ಅಧ್ಯಕ್ಷ ಉಮೇಶ ದಳವಾಯಿ, ಯುವಕ ಸಂಘದ ಅಧ್ಯಕ್ಷ ಸುರೇಶ ಜಾಲಗಾರ, ಗ್ರೇಡ್೨ ತಹಸೀಲ್ದಾರ್ ನಾಗಪ್ಪ ಸಜ್ಜನ್, ಪ್ರಮುಖರಾದ ವೀರನಗೌಡ ಪೊಲೀಸ್ ಪಾಟೀಲ್, ಹನುಮಂತಪ್ಪ ಹನುಮಾಪುರ, ಎಚ್.ಎಚ್.ಕುರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಫ್.ಎಂ.ಕಳ್ಳಿ, ತಾಪಂ ಸಹಾಯಕ ನಿರ್ದೇಶಕ ಎಫ್.ಡಿ.ಕಟ್ಟಿಮನಿ ಸೇರಿದಂತೆ ಮತ್ತಿತರರು ಇದ್ದರು.
--

0/Post a Comment/Comments