ಪ್ರಗತಿವಾಣಿ ಕೊಪ್ಪಳ
ಯಲಬುರ್ಗಾ: ಪ್ರತಿಯೊಬ್ಬರೂ ಕಾನೂನಿನ ಸಾಮಾನ್ಯ ಜ್ಞಾನ ಹೊಂದಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿದರು.
ತಾಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಸೋಮವಾರ ಹಮ್ಮಿಕೊಂಡಿದ್ದ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕದ ಅಭ್ಯಾಸದ ಜತೆಗೆ ಕಾನೂನಿನ ಅರಿವಿರಬೇಕು. ಮಾನವೀಯ ಮೌಲ್ಯಗಳು, ಬದುಕು ರೂಪಿಸುವ ಶಿಕ್ಷಣದ ಅವಶ್ಯಕತೆ ಇದೆ. ಎಲ್ಲಾ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದರು.
ಫೆ.೧೧ ರಂದು ಲೋಕ್ ಅದಾಲತ್ ಇದ್ದು, ಬಹುದಿನದ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಬಗೆಹರಿಸಿಕೊಂಡು ಸಮಾಜದಲ್ಲಿ ಪ್ರೀತಿ, ನೆಮ್ಮದಿಯಿಂದ ಬದುಕಬೇಕು ಎಂದರು.
ಪೋಕ್ಸೋ ಕಾಯ್ದೆ ಕುರಿತು ವಕೀಲ ಮಲ್ಲನಗೌಡ ಪಾಟೀಲ್ ಉಪನ್ಯಾಸ ನೀಡಿದರು.
ಈ ಸಂದರ್ಭ ಪ್ರಭಾರ ಪ್ರಾಚಾರ್ಯ ವಿಜಯಕುಮಾರ, ನ್ಯಾಯಾಲಯ ಸಿಬ್ಬಂದಿ ರಾಘವೇಂದ್ರ, ವಿನಾಯಕ್, ಶಿಕ್ಷಕ ಶಂಕರ ಇಂಗಳದಾಳ ಸೇರಿದಂತೆ ಇತರರಿದ್ದರು.
Post a Comment