ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್


ಪ್ರಗತಿವಾಣಿ ಕೊಪ್ಪಳ
ಯಲಬುರ್ಗಾ: ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ಕ್ಷೇತ್ರದ ಶಾಸಕರಾಗಿ ಜನಪರ ಕಾರ್ಯಕ್ರಮ ಜಾರಿಗೆ ತಂದು ಅಭಿವೃದ್ಧಿಗೆ ಶ್ರಮಿಸಿದ್ದಾರೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್‌ರ ೭೫ನೇ ವರ್ಷದ ಜನ್ಮದಿನ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯರನ್ನು ಗೌರವದಿಂದ ಕಾಣುವುದು ನಮ್ಮ ದೇಶದ ಪರಂಪರೆ. ಗುರು ಪರಂಪರೆ ಬೇರೆ ಯಾವ ದೇಶದಲ್ಲಿಯೂ ಇಲ್ಲ.  ೧೯೯೯ ರಿಂದ ೨೦೦೪ರ ವರೆಗೂ ಶಾಸಕರಾಗಿ ತಾಲೂಕಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಇವರು ಶಾಸಕರಿದ್ದ ಸಂದರ್ಭದಲ್ಲಿ ನಾನು ವಿರೋಧ ಪಕ್ಷದ ನಾಯಕನಾಗಿದ್ದೆ ಎಂದರು.
ನಾನು ಸಿಎಂ ಆಗಿದ್ದ ಕೊಪ್ಪಳ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಆದ್ಯತೆ ನೀಡಲಾಗಿದೆ. ೪೩ ಹೊಸ ತಾಲೂಕುಗಳನ್ನು ರಚಿಸಲಾಯಿತು. ಅಲ್ಲದೇ ಕೊಪ್ಪಳ ಏತ ನೀರಾವರಿ ಯೋಜನೆಗೆ ಒಂದು ಸಾವಿರ ಕೋಟಿ ಅನುದಾನ ನೀಡಿ ಅಡಿಗಲ್ಲು ಹಾಕಲಾಗಿತ್ತು. ಬಳಿಕ ಬಂದ ಸರ್ಕಾರ ಈ ಯೋಜನೆ ಮುಂದುವರೆಸಲಿಲ್ಲ. ಮತ್ತೆ ನಮ್ಮ ಸರ್ಕಾರದಲ್ಲಿ ಅನುದಾನ ನೀಡಿ ಕಾಮಗಾರಿ ಪ್ರಾರಂಭಿಸಿದ್ದು, ಶೀಘ್ರದಲ್ಲೇ ಅನುಷ್ಠಾನಗೊಳ್ಳಲಿದೆ ಎಂದರು. ಮಾಜಿ ಡಿಸಿಎಂ ಲಕ್ಷö್ಮಣ ಸವದಿ, ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ಮಾತನಾಡಿದರು.
ಸಚಿವ ಹಾಲಪ್ಪ ಆಚಾರ್, ಸಂಸದ ಸಂಗಣ್ಣ ಕರಡಿ, ಶಾಸಕ ಕಳಕಪ್ಪ ಬಂಡಿ, ಮಾಜಿ ಸಚಿವ ಎಸ್.ಎಸ್.ಪಾಟೀಲ್, ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ನವೀನ ಗುಳಗಣ್ಣವರ, ಜಿಪಂ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ್, ಲ್ಯಪುರ ವನಶ್ರೀ ಮಠದ ಶ್ರೀ ಬಸವಕುಮಾರ ಸ್ವಾಮೀಜಿ, ನೀಲಾನಗರದ ಶ್ರೀ ಕುಮಾರ ಮಹಾರಾಜರು, ಶ್ರೀ ವಿಜಯ ಮಹಾಂತ ಸ್ವಾಮೀಜಿ ಮಾತನಾಡಿದರು. ಮಾಜಿ ಶಾಸಕರ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮುಂಡರಗಿಯ ಶ್ರೀ ಅನ್ನದಾನೆಶ್ವರ ಸ್ವಾಮೀಜಿ, ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ,  ಶ್ರೀಕೇಶವಾನಂದ ಸ್ವಾಮೀಜಿ, ಶ್ರೀ ಬಸವಲಿಂಗೇಶ್ವರ ಸ್ವಾಮೀಜಿ, ಶ್ರೀ ಒಪ್ಪತ್ತೇಶ್ವರ ಸ್ವಾಮೀಜಿ, ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಸಯ್ಯದ್‌ಷಾ ಮುರ್ತುಜಾ ಖಾದ್ರಿ, ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ,  ಮಾಜಿ ಶಾಸಕರಾದ ಕೆ.ಶರಣಪ್ಪ, ಹಸನ್‌ಸಾಬ್ ದೋಟಿಹಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಮಾಜಿ ಸದಸ್ಯರಾದ ಮೋಹನ ಲಿಂಬಿಕಾಯಿ, ಎಚ್.ಆರ್.ಶ್ರೀನಾಥ, ಕರಿಯಣ್ಣ ಸಂಗಟಿ, ಪ್ರಮುಖರಾದ ಬಸವರಾಜ ಉಳ್ಳಾಗಡ್ಡಿ, ಸುಧಾಕರ ದೇಸಾಯಿ, ಗುರಣ್ಣ ಗೋಡಿ, ರತನ ದೇಸಾಯಿ, ಬಸವರಾಜ ಕಜ್ಜಿ, ಸಿದ್ದಪ್ಪ ಕಟ್ಟಿಮನಿ ಸೇರಿದಂತೆ ಇತರರಿದ್ದರು.
--
ಕಾಂಗ್ರೆಸ್‌ಗೆ ಆರೋಪ ಮಾಡಲು ಯಾವುದೇ ವಿಷಯವಿಲ್ಲ;
ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ, ಗೃಹ ಮಂತ್ರಿ ಅಮಿತ್ ಶಾ ಬರುತ್ತಿರುವ ವಿಷಯ ತಿಳಿದ  ಕಾಂಗ್ರೆಸ್ಸಿಗರು ಸಹಿಸುಕೊಳ್ಳುತ್ತಿಲ್ಲ. ಟೀಕೆ ಮಾಡಲು ಅವರಿಗೆ ಯಾವುದೇ ವಿಷಯವಿಲ್ಲ ಅವರು ಬರುವುದರಿಂದ ನಮಗೆ ನಷ್ಟವಾಗುತ್ತದೆ ಎಂಬ ಭಾವನೆ ಕಾಂಗ್ರೆಸ್‌ನ್ನು ಕಾಡುತ್ತಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ೨೦೨೩ರ ಚುನಾವಣೆಯಲ್ಲಿ ಗುಜರಾತ ಮಾದರಿ ಚುನಾವಣೆ ಚರ್ಚೆ ನಮ್ಮಲಿಲ್ಲ. ಈ ಸಲ ನಾನೂ ಕೂಡ ಸ್ಪರ್ಧೆ ಮಾಡುವುದು ನಿಶ್ಚಿತ. ವಿಜಯ ಸಂಕಲ್ಪ ಯಾತ್ರೆ ಬಸವ ಕಲ್ಯಾಣದಿಂದ ಆರಂಭವಾಗಲಿದೆ. ಕಾಂಗ್ರೆಸ್ ನಾಯಕತ್ವ ಕಳೆದುಕೊಂಡ ಪಕ್ಷವಾಗಿದೆ. ಈಗ ಅದು ಐಸಿಯುನಲ್ಲಿದೆ. ಅರ್ಕಾವತಿ ಬಡಾವಣೆಯ ೯೪೮ ಎಕರೆ ಭೂಮಿ ಹೋಲ್‌ಸೇಲ್ ಆಗಿದೆ. ಸಿದ್ದರಾಮಯ್ಯ ಅವಧಿಯಲ್ಲಿ ಡಿನೋಟಿಪೈ ಆಗಿದೆ. ಈ ಬಗ್ಗೆ ನಾನು ವಿಪಕ್ಷ ನಾಯಕನಿದ್ದಾಗ ದಾಖಲೆ ಸಮೇತ ಬಿಡುಗಡೆ ಮಾಡಿದ್ದೆ. ಕೋರ್ಟ್ನಲ್ಲಿ ಕಾಂಗ್ರೆಸ್ ಪರ ಕ್ಲೀನ್ ಚಿಟ್ ಕೊಟ್ಟಿದ್ದರೆ, ಕೆಂಪಣ್ಣ ಆಯೋಗದ ವರದಿ ಬಹಿರಂಗ ಪಡಿಸಲಿ. ತನಿಖೆ ನಡೆಯಲಿ ಎಂದರು.
ಮಾಜಿ ಡಿಸಿಎಂ ಲಕ್ಷö್ಮಣ ಸವದಿ ಮಾತನಾಡಿ, ಬೆಳಗಾವಿ ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ರಾಷ್ಟಿçÃಯ ನಾಯಕರು ಬರಲಿದ್ದಾರೆ. ವಿಜಯ ಸಂಕಲ್ಪ ಯಾತ್ರೆಗೆ ಬಸವಕಲ್ಯಾಣದಿಂದ ಆರಂಭವಾಗಲಿದೆ.  ದಾವಣಗೆರೆಯಲ್ಲಿ ಸಮಾರೋಪ ಸಮಾವೇಶ ನಡೆಯಲಿದೆ. ಡಿಕೆಶಿ, ಸಿದ್ದರಾಮಯ್ಯ ಹೊರತುಪಡಿಸಿದರೆ ಕಾಂಗ್ರೆಸ್‌ನಲ್ಲಿ ಯಾವುದೇ ನಾಯಕರಿಲ್ಲ. ನನ್ನ ಸ್ಪರ್ಧೆ ಕುರಿತು ಹೈಕಮಾಂಡಗೆ ಬಿಟ್ಟ ವಿಚಾರ ಎಂದರು.
-----

0/Post a Comment/Comments