ಪ್ರಗತಿವಾಣಿ ಕೊಪ್ಪಳ
ಯಲಬುರ್ಗಾ: ತಾಲೂಕಿನ ತಾಳಕೇರಿ ಗ್ರಾಮದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು.
ಮುಖಂಡ ಬಸವರಾಜ ಹಿರೇಮನಿ ಮಾತನಾಡಿ, ಈ ಹಿಂದೆ ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಹಲವಾರು ಭಾಗ್ಯಗಳನ್ನು ನೀಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡಕುಟುಂಬಗಳಿಗೆ ಪ್ರತಿ ತಿಂಗಳು ೨೦೦ ಯುನಿಟ್ ವಿದ್ಯುತ್ ಉಚಿತ, ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬದ ಮಹಿಳೆಗೆ ೨೦೦೦ ರೂ. ಜಮೆ, ೧೦ ಕೆಜಿ ಅಕ್ಕಿ ನೀಡಲು ಕಾಂಗ್ರೆಸ್ ಉದ್ದೇಶಿಸಿದೆ. ಅದರ ಅಂಗವಾಗಿ ಪ್ರತಿ ಗ್ರಾಮದಲ್ಲಿ ಗ್ಯಾರಂಟಿ ಕಾರ್ಡ್ ವಿತರಿಸಲು ತೀರ್ಮಾನಿಸಲಾಗಿದ್ದು, ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದ್ದಾರೆ. ಸರ್ವರ ಏಳಿಗೆ ಬಯಸುವ ಕಾಂಗ್ರೆಸ್ ಅಲೆ ಈಗಾಗಲೇ ಶುರುವಾಗಿದೆ. ಬಿಜೆಪಿ ಸರ್ಕಾರದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರಕ್ಕೆ ಜನ ರೋಸಿ ಹೋಗಿದ್ದು, ಈ ಸಲ ಮತದಾರರು ಕಾಂಗ್ರೆಸ್ ಕೈಹಿಡಿಯಲಿದ್ದಾರೆ. ಕೈ ಸರ್ಕಾರ ಅಧಿಕಾರಕ್ಕೆ ಬರಲಿದೆ. ಬಸವರಾಜ ರಾಯರಡ್ಡಿ ಅವರನ್ನು ಮತ್ತೊಮ್ಮೆ ಶಾಸಕರನ್ನಾಗಿ ಮಾಡಲು ಪ್ರತಿಯೊಬ್ಬರೂ ಕೈಜೋಸಬೇಕು ಎಂದರು.
ಈ ಸಂದರ್ಭ ಪ್ರಮುಖರಾದ ರಾಘವೇಂದ್ರಾಚಾರ್ ಜೋಶಿ, ಭೀಮನಗೌಡ ಪೊ.ಪಾಟೀಲ್, ಹೊಳೆಗೌಡ ಪಾಟೀಲ್, ದೇವಪ್ಪ ಹಳ್ಳಿ, ಹುಸೇನ್‌ಸಾಬ್ ಟೆಂಗುಂಟಿ, ಜಂಗ್ಲೆಸಾಬ್ ಕುದರಿ, ಪ್ರಾಣೇಶ, ಶಿವು, ಖಾಜೆಸಾಬ್, ಮಾರುತಿ, ವಂಗ್ಲೆಸಾಬ್, ಈಶ್ವರ, ನಾಗರಾಜ ಸೇರಿದಂತೆ ಇತರರಿದ್ದರು.
-----
Post a Comment