ಪ್ರಗತಿವಾಣಿ ಕೊಪ್ಪಳ
ಯಲಬುರ್ಗಾ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಗ್ರಾಪಂ ಪಿಡಿಒ ವೆಂಕಟೇಶ ನಾಯ್ಕ ಹೇಳಿದರು.
ತಾಲೂಕಿನ ಚಿಕ್ಕಮ್ಯಾಗೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವೀಪ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
ಗ್ರಾಪಂ ವ್ಯಾಪ್ತಿಯಲ್ಲಿ ಶೇ.೧೦೦ ರಷ್ಟು ಮತ ಚಲಾವಣೆಯಿಸುವ ಮೂಲಕ ೧೮ ವರ್ಷ ಮೇಲ್ಪಟ್ಟ ತಮ್ಮ ಹಕ್ಕನ್ನು ಉಪಯೋಗಿಸಿಕೊಳ್ಳಬೇಕು.
80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮನೆಯಲ್ಲೆ ಮತದಾನ ಮಾಡಲು ಅವಕಾಶ ನೀಡಲಾಗಿದ್ದು, ಸದುಪಯೋಗ ಪಡೆಯಬೇಕು ಎಂದರು.
ತಾಲೂಕು ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭ ಗ್ರಾಪಂ ಅಧ್ಯಕ್ಷೆ ಕೆಂಚವ್ವ ರಾಮಣ್ಣ ಹಿರೇಮನಿ, ಸದಸ್ಯ ಶರಣಕುಮಾರ ಅಮರಗಟ್ಟಿ, ಕಾರ್ಯದರ್ಶಿ ಹನುಮಂತಪ್ಪ ಕುರಿ ಹಾಗೂ ಸಿಬ್ಬಂದಿ ಸೇರಿ ಇತರರಿದ್ದರು.
Post a Comment