ಪ್ರಗತಿವಾಣಿ ಕೊಪ್ಪಳ
ಯಲಬುರ್ಗಾ: ರಾಜ್ಯದಲ್ಲಿ ಗೋವುಗಳ ಸಂರಕ್ಷಣೆ ಜತೆಗೆ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಿದೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು.
ತಾಲೂಕಿನ ಬೇವೂರು ಗ್ರಾಮದ ಹೊರ ಹೊಲಯದಲ್ಲಿ ನಿರ್ಮಾಣವಾದ ಗೋಶಾಲೆ ಹಾಗೂ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಜಾನುವಾರು ಸಂತತಿ ಹೆಚ್ಚಿಸುವ ಮೂಲಕ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಗೋವುಗಳ ಸಂರಕ್ಷಣಾ ಕಾಯ್ದೆ ಜಾರಿಗೆ ತರುವ ಮೂಲಕ ಜಾನುವಾರಗಳ ಉಳಿವಿಗೆ ಶ್ರಮಿಸಿದೆ. ಕಟುಕರ ಪಾಲಾಗುವ ಗೋವುಗಳ ಉಳಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಒತ್ತು: ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ನನ್ನ ಆಡಳಿತಾವಧಿಯಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ. ಪ್ರತಿಯೊಂದು ಗ್ರಾಮದಲ್ಲಿ ಗುಣಮಟ್ಟದ ಕೆಲಸ ಮಾಡಿದ ತೃಪ್ತಿ ನನಗಿದೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭ ಪಶು ವೈದ್ಯಾಧಿಕಾರಿಗಳಾದ ಡಿ.ಮೋಹನಕುಮಾರ, ಪ್ರಕಾಶ ಚೂರಿ, ಗ್ರಾಪಂ ಅಧ್ಯಕ್ಷ ಸೋಮಲಿಂಗಪ್ಪ ಕೋಳಜಿ, ತಹಸೀಲ್ದಾರ್ ವಿಠ್ಠಲ ಚೌಗಲಾ, ತಾಪಂ ಇಒ ಸಂತೋಷ ಪಾಟೀಲ್, ಪ್ರಮುಖರಾದ ಶಂಕರಗೌಡ ಟಣಕನಕಲ್, ಶರಣಪ್ಪ ಈಳಿಗೇರ್, ವೀರಣ್ಣ ಹುಬ್ಬಳ್ಳಿ, ವಿಶ್ವನಾಥ ಮರಿಬಸಪ್ಪನವರ, ಶಿವಪ್ಪ ವಾದಿ, ಸಿದ್ದು ಮಣ್ಣಿನವರ, ಅಯ್ಯನಗೌಡ ಕೆಂಚಮ್ಮನವರ್, ಕಳಕಪ್ಪ ಕಂಬಳಿ ಸೇರಿದಂತೆ ಇತರರಿದ್ದರು.
-----
Post a Comment