ಅಪಾರ ಸಂಖ್ಯೆಯ ಜನತೆ ಕಾಂಗ್ರೆಸ್ ತೊರೆದು ಸಚಿವ ಹಾಲಪ್ಪ ಆಚಾರ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ


ಪ್ರಗತಿವಾಣಿ ಕೊಪ್ಪಳ
ಯಲಬುರ್ಗಾ: ತಾಲೂಕಿನ ಸಂಗನಾಳ, ಕೋನಸಾಗರ ಗ್ರಾಮದ ಅಪಾರ ಸಂಖ್ಯೆಯ ಕಾರ್ಯಕರ್ತರು ಕಾಂಗ್ರೆಸ್ ತೊರದು ಬುಧವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸಚಿವ ಹಾಲಪ್ಪ ಆಚಾರ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ಹಾಲಪ್ಪ ಆಚಾರ್ ಮಾತನಾಡಿ, ಕ್ಷೇತ್ರದಲ್ಲಿ ನಾನು ಮಾಡಿದ ಅಭಿವೃದ್ಧಿ ಕಾರ್ಯ ಮೆಚ್ಚಿ ಬಿಜೆಪಿ ಪಕ್ಷ ಸೇರುತ್ತಿರುವುದು ಒಳ್ಳೆಯ ಬೆಳವಣಿಗೆ.
ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಿ ಕೈಗೊಂಡ ಜನಪರ ಅಭಿವೃದ್ಧಿ ಕಾರ್ಯಕ್ರಮಗಳೇ ಚುನಾವಣೆಯಲ್ಲಿ ಶ್ರೀರಕ್ಷೆಯಾಗಲಿವೆ. ಕೇಂದ್ರ ಮತ್ತು ರಾಜ್ಯ ನಾಯಕರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಗುರುತಿಸಿ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ.  ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಜನತೆ ಆಶೀರ್ವಾದ ಮಾಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಇದೇ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
--------------

0/Post a Comment/Comments