ಪ್ರಗತಿವಾಣಿ ಕೊಪ್ಪಳ
ಚುನಾವಣೆಯನ್ನು ಎಲ್ಲರೂ ಹಬ್ಬದಂತೆ ಆಚರಿಸಬೇಕು. ಕಡ್ಡಾಯ ಮತದಾನ ಮಾಡಬೇಕೆಂಬ ಉದ್ದೇಶದಿಂದ ವಿನೂತನವಾಗಿ ಸ್ವೀಪ್ ಜಾಗೃತಿ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಚುನಾವಣಾಧಿಕಾರಿ ಕೆ.ವಿ.ಕಾವ್ಯರಾಣಿ ಹೇಳಿದರು.
ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಚುನಾವಣೆ ಆಯೋಗ, ಸ್ವೀಪ್ ಸಮಿತಿ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಹಮ್ಮಿಕೊಂಡಿದ್ದ ಕ್ಯಾಂಡಲ್ ದೀಪ ಹಚ್ಚುವ ಮೂಲಕ ಚುನಾವಣಾ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರದಲ್ಲಿ ಈ ಸಲ ಶೇ.೧೦೦ರಷ್ಟು ಮತ ಚಲಾವಣೆಗೆ ಅಧಿಕಾರಿಗಳು ಕೈಜೋಡಿಸಬೇಕು. ಮತದಾರರಲ್ಲಿ ಅರಿವು ಮೂಡೊಸಬೇಕು ಎಂದರು.
ಈ ಸಂದರ್ಭ ಸಹಾಯಕ ಚುನಾವಣಾಧಿಕಾರಿ ವಿಠ್ಠಲ್ ಚೌಗಲೆ, ತಾಪಂ ಇಒ ಸಂತೋಷ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ್, ತಾಪಂ ಸಹಾಯಕ ನಿರ್ದೇಶಕ ಫಕೀರಪ್ಪ ಕಟ್ಟಿಮನಿ, ಸಿಡಿಪಿಒ ಸಿಂಧು, ಪಿಎಸ್ಐ ಹುಲಿಗೇಶ, ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಸೇರಿದಂತೆ ಇತರರಿದ್ದರು.
=====
ಮತಗಟ್ಟೆಯಲ್ಲಿ ನೀರು, ಶೌಚಗೃಹ, ರ್ಯಾಂಪ್ ವ್ಯವಸ್ಥೆ ಇರಲಿ
ಪ್ರಗತಿವಾಣಿ ಕೊಪ್ಪಳ
ಯಲಬುರ್ಗಾ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ತಾಲೂಕಿನ ಹಿರೇವಂಕಲಕುಂಟಾ ಹೋಬಳಿ ವ್ಯಾಪ್ತಿಯ 58 ಮತಗಟ್ಟೆಗಳಿಗೆ ಚುನಾವಣಾಧಿಕಾರಿ ಕೆ. ವಿ.ಕಾವ್ಯರಾಣಿ ಗುರುವಾರ ಭೇಟಿ ನೀಡಿ ಕುಡಿವ ನೀರು, ಶೌಚಗೃಹ, ರ್ಯಾಂಪ್ ಸೇರಿದಂತೆ ಮೂಲ ಸೌಕರ್ಯ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿ, ಚುನಾವಣೆ ಆಯೋಗದ ನಿರ್ದೇಶನದಂತೆ ಸಂಬಂಧಿಸಿದ ಗ್ರಾಪಂ ಪಿಡಿಒಗಳು ಮತಗಟ್ಟೆಯಲ್ಲಿ ಬೆಳಕು, ಕುಡಿವ ನೀರು, ಶೌಚಗೃಹ ಹಾಗೂ ವಿಶೇಷಚೇತನರಿಗೆ ರ್ಯಾಂಪ್ ವ್ಯವಸ್ಥೆ ಕಲ್ಪಿಸಬೇಕು. ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಸಮಸ್ಯೆ ಕಂಡುಬಂದಲ್ಲಿ ಸಂಬಂಧಿಸಿದವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭ ಕಂದಾಯ ನಿರೀಕ್ಷಕ ಶರಣಪ್ಪ ಮರ್ಲಾನಪುರ, ಗ್ರಾಪಂ ಪಿಡಿಒಗಳು, ಸಿಬ್ಬಂದಿ ಇದ್ದರು.
-----
Post a Comment