ಕ್ಣೇತ್ರದ ಅಭಿವೃದ್ಧಿಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ


ಪ್ರಗತಿವಾಣಿ ಕೊಪ್ಪಳ
ಯಲಬುರ್ಗಾ: ಕ್ಷೇತ್ರದ ಸರ್ವ ಸಮಾಜದ ಅಭಿವೃದ್ಧಿಗಾಗಿ ನಾನು ಈ ಬಾರಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಮತದಾರರು ಆಶೀರ್ವದಿಸಬೇಕು ಎಂದು ಪಕ್ಷೇತರ ಅಭ್ಯರ್ಥಿ ಶ್ಯಾಮೀದ್‌ಸಾಬ್ ಮುಲ್ಲಾ ತಿಳಿಸಿದರು.
ಪಟ್ಟಣದ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಎಲ್ಲಾ ಪಕ್ಷಗಳಿಂದ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗಿದೆ. ಇದರಿಂದ ನಮ್ಮ ಸಮುದಾಯ ಅನೇಕ ರೀತಿಯ ತೊಂದರೆ ಅನುಭವಿಸುತ್ತಿದೆ. ಬಿಜೆಪಿ ಸರ್ಕಾರದ ಅಧಿಕಾರದಲ್ಲಿ ೨ಬಿ ಮೀಸಲಾತಿ ರದ್ದುಪಡಿಸಿ ಮುಸ್ಲಿಮರಿಗೆ ಅನ್ಯಾಯ ಮಾಡಿದೆ.
ಕ್ಷೇತ್ರದ ಸಮಗ್ರ ಅಭಿವೃದ್ಧಿ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಜನತೆ ನನಗೆ ಅವಕಾಶ ಮಾಡಿಕೊಡಬೇಕು ಎಂದರು.
--

0/Post a Comment/Comments