ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಿ


ಪ್ರಗತಿವಾಣಿ ಕೊಪ್ಪಳ
ಯಲಬುರ್ಗಾ: ವಿಧಾನಸಭಾ‌ ಸಾರ್ವತ್ರಿಕ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬದಂತೆ‌ ಆಚರಿಸಬೇಕು ಎಂದು ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಹೇಳಿದರು.
ತಾಲೂಕಿನ ಬಳೂಟಗಿ ಗ್ರಾಪಂ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗುರುವಾರ ೨ನೇ ಹಂತದ ಸ್ವೀಪ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕಡ್ಡಾಯ ಮತದಾನ ಮಾಡಬೇಕು. ಈ ಬಾರಿ ವಿಶೇಷವಾಗಿ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಶಿಷ್ಟಚೇತನರಿಗೆ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಎಲ್ಲರೂ ಮುಂಚಿತವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಬೇಕು. ಹೊಸದಾಗಿ 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕೂಲಿಕಾರರಿಗೆ ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.
ಬಳಿಕ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈ ಸಂದರ್ಭ ತಾಪಂ ತಾಂತ್ರಿಕ ಸಂಯೋಜಕ ಸಂತೋಷ ನಂದಾಪುರ, ಪಿಡಿಒ ರಮೇಶ ಹೊಸಮನಿ, ತಾಂತ್ರಿಕ ಸಹಾಯಕ ವಿಜಯಕುಮಾರ, ಕರವಸೂಲಿಗಾರ ಕಲ್ಲಪ್ಪ, ಡಿಇಒ ಮಹೇಶ್, ಗ್ರಾಮ ಕಾಯಕ ಮಿತ್ರರಾದ ವಿದ್ಯಾ ಗಾಣಿಗೇರ್, ಕೆಎಚ್‌ಪಿಟಿ ಸಿಬ್ಬಂದಿ ಸೇರಿದಂತೆ ಇತರರಿದ್ದರು.

0/Post a Comment/Comments