ಪ್ರಗತಿವಾಣಿ ಕೊಪ್ಪಳ
ಯಲಬುರ್ಗಾ: ವಿಧಾನಸಭೆ ಅಧಿವೇಶನ ನಡೆಯುವ ವೇಳೆ ಬಿಜೆಪಿ ಶಾಸಕರು ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಮೇಲೆ ಪೇಪರ್ ಎಸೆದು ಬಾಯಿಗೆ ಬಂದ ಹಾಗೆ ಮಾತನಾಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಈರಪ್ಪ ಕುಡಗುಂಟಿ ಅಸಮಾಧಾನ ವ್ಯಕ್ತಪಡಿಸಿದರು. ಹೇಳಿದರು.
ಪಟ್ಟಣದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸದನ ನಡೆಯುತ್ತಿರುವ ಸಂದರ್ಭದಲ್ಲಿ ಡೆಪ್ಯುಟಿ ಸ್ಪೀಕರ್ ಮೇಲೆ ಅನುಚಿತವಾಗಿ ವರ್ತಿಸಿ, ಕೆಟ್ಟ ಪದಗಳಿಂದ ನಿಂದನೆ ಮಾಡಿರುವುದು ಬಿಜೆಪಿ ಸಂಸ್ಕೃತಿ ಎತ್ತಿ ತೋರಿಸುತ್ತದೆ. ಸಭಾಧ್ಯಕ್ಷರ ಸ್ಥಾನದಲ್ಲಿ ಕುಳಿತಿರುವವರನ್ನು ಗೌರವಯುತವಾಗಿ ಕಾಣಬೇಕು. ಏಕಾಏಕಿ ಅವರ ಮುಂದೆ ಪೇಪರ್ ಎಸೆದು ಕಾನೂನನ್ನು ಉಲ್ಲಂಘನೆ ಮಾಡಿದ್ದಾರೆ. ಕಾನೂನಾತ್ಮಕವಾಗಿ ಯು.ಟಿ.ಖಾದರ್ ಅವರು ೧೦ ಜನ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದು ಸ್ವಾಗತಾರ್ಹ. ಸದನದಲ್ಲಿ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿರುವುದನ್ನು ಬಿಜೆಪಿಯವರು ಸಹಿಸಿಕೊಳ್ಳದೇ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಸಂವಿಧಾನದ ಮೇಲೆ ಅವರಿಗೆ ಗೌರವ ಇಲ್ಲ. ಹೀಗಾಗಿ ಸದನದಲ್ಲಿ ದೊಂಬರಾಟ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
--
Post a Comment